

ಮಂಗಳೂರು: ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ. ಪಾಟೀಲ ಆ.27ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಬೆಳಗ್ಗೆ 11.30ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 11.45ಕ್ಕೆ ನಗರದ ಸರ್ಕೀಟ್ ಹೌಸ್‌ಗೆ ತೆರಳಲಿದ್ದಾರೆ. ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ 3.30 ರಿಂದ 5.30ರವರೆಗೆ ಮುಲ್ಕಿ ಹಾಗೂ ಮೂಡುಬಿದಿರೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸುವರು. ಸಂಜೆ 5.35ಕ್ಕೆ ಮುಲ್ಕಿ ಗೇರುಕಟ್ಟೆ ಕಾರ್ನಾಡು ಮಾರ್ಗವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸಂಜೆ 6.50ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.