ಜು.15 ಮತ್ತು 16ರಂದು ಸಚಿವ ಚಲುವರಾಯಸ್ವಾಮಿ ಜಿಲ್ಲಾ ಪ್ರವಾಸ

1 (3)
Published on

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜು.15 ಮತ್ತು 16ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

15ರಂದು ಬೆಳಗ್ಗೆ 9.15ಕ್ಕೆ ನಗರದ ಮುನ್ಷಿ ಪ್ರೇಮ್‌ಚಂದ್ ಸಭಾಂಗಣದಲ್ಲಿ ಆಯೋಜಿಸಿರುವ ಅಭಿನಂದನಾ ಸಮಾರಂಭ, 9.30ಕ್ಕೆ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆಯೋಜಿಸಿರುವ ದೇಶಹಿತ ವಾರಪತ್ರಿಕೆಯ ಲೋಗೋ ಬಿಡುಗಡೆ, 10ಗಂಟೆಗೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ಹಬ್ಬ, 11ಗಂಟೆಗೆ ತಾಲೂಕಿನ ವಿ.ಸಿ ಫಾರ್ಮ್‌ನಲ್ಲಿ ಆಯೋಜಿಸಿರುವ ರಾಗಿ ಲಕ್ಷ್ಮಣಯ್ಯ ಅವರ 27ನೇ ಸ್ಮಾರಕ ಉಪನ್ಯಾಸ ಮತ್ತು ಸನ್ಮಾನ ಕಾರ್ಯಕ್ರಮ, ಮಧ್ಯಾಹ್ನ 1.30ಕ್ಕೆ ಕೆ.ಆರ್.ಪೇಟೆ ತಾಲೂಕು ಬೀರುವಳ್ಳಿ ಗ್ರಾಮದ ಸ್ಥಳೀಯ ಕಾರ್ಯಕ್ರಮ, ಮಧ್ಯಾಹ್ನ 3ಕ್ಕೆ ಅಕ್ಕಿಹೆಬ್ಬಾಳು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಗೋದಾಮು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 16ರಂದು ಬೆಳಗ್ಗೆ 9 ಗಂಟೆಗೆ ನಾಗಮಂಗಲದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net