

ಮಂಡ್ಯ: ರೈತರಿಗೆ ಸಾವಯವ ಬೆಳೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸೋಮವಾರ ನಗರದಲ್ಲಿ ರಾಜ್ಯಮಟ್ಟದ ಸಿರಿಧಾನ್ಯ ಮೇಳದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಎತ್ತಿನಗಾಡಿ ಓಡಿಸುವ ಮೂಲಕ ಗಮನಸೆಳೆದರು.
ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಮಂತ್ರಾಲಯ, ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರ್ತು ನಿಗಮ ನಿಯಮಿತ, ಕೃಷಿ ವಾಣಿಜ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಗರದ ಡಾ.ರಾಜ್‌ಕುಮಾರ್ ಬಡಾವಣೆಯ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಫ್ಯಾಕ್ಟರಿ ವೃತ್ತದಿಂದ ಮೈದಾನದವರೆಗೆ ಮೆರವಣಿಗೆ ಆಯೋಜಿಸಲಾಗಿತ್ತು. ಅದರಂತೆ ಸಚಿವರು ಸ್ವತಃ ಎತ್ತಿನಗಾಡಿ ಓಡಿಸಿದರು. ಈ ವೇಳೆ ಚುಂಚಶ್ರೀ ಡಾ.ನಿರ್ಮಲಾನಂದನಾಥಸ್ವಾಮೀಜಿ, ಶಾಸಕರಾದ ಕದಲೂರು ಉದಯ್, ಮಧು ಜಿ.ಮಾದೇಗೌಡ ಇದ್ದರು.