

ಮಂಡ್ಯ: ಮುಂಗಾರು ಪ್ರಾರಂಭವಾಗುತ್ತಿರುವುದರಿಂದ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊಡಬೇಕು. ಒಂದು ವೇಳೆ ಕಳಪೆಯಾಗಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆ ಅಧಿಕಾರಿಗಳು ಬೆಳೆ ವಿಮೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕ ವಿ.ಅಶೋಕ್ ಮಾತನಾಡಿ, ಜಿಲ್ಲೆಯಲ್ಲಿ ಅತಿ ಹೆಚ್ಚು ಯೂರಿಯಾ ಬಳಕೆ ಮಾಡಲಾಗುತ್ತಿದೆ. ಯೂರಿಯಾ ಜತೆಗೆ ರಂಜಕ, ಪೋಟ್ಯಾಷ್ ಇರುವ ರಸಗೊಬ್ಬರ ಬಳಕೆ ಮಾಡಬೇಕು. ಯೂರಿಯಾ ಸಬ್ಸಿಡಿ ದರದಲ್ಲಿ ದೊರೆಯುತ್ತದೆ. ಕಡಿಮೆ ಹಣದಲ್ಲಿ ದೊರೆಯುವ ಕಾರಣ ಹೆಚ್ಚು ಬಳಕೆ ಮಾಡಲಾಗುತ್ತಿದೆ. ಇದರಿಂದಾಗಿ ಭೂಮಿ ಹಾಳಾಗುವುದಲ್ಲದೆ, ರೋಗಬಾಧೆ ಹೆಚ್ಚುತ್ತದೆ ಎಂದು ವಿವರಿಸಿದರು. ಸಚಿವರು ಪ್ರತಿಕ್ರಿಯಿಸಿ, ಈ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದರು. ಶಾಸಕ ದರ್ಶನ್ ದನಿಗೂಡಿಸಿ, ರೈತರ ಉತ್ಪನ್ನಗಳಿಗೆ ದೊರೆಯಬಹುದಾದ ಬೆಂಬಲ ಬೆಲೆ ಬಗ್ಗೆ ಜಾಗೃತಿ ಮೂಡಿಸಿ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹದಿನೈದು ದಿನದಲ್ಲಿ ಕ್ರಮ ವಹಿಸಿ: ಚಿಕ್ಕಮಂಡ್ಯ ಬಳಿ ತಮಿಳುಕಾಲನಿ ನಿವಾಸಿಗಳಿಗಾಗಿ ನಿರ್ಮಿಸಿರುವ ಮನೆಗಳಿಗೆ 15 ದಿನಗಳೊಳಗೆ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ವಹಿಸದಿದ್ದರೆ ಕ್ರಮಕ್ಕೆ ಶಿಾರಸು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಕೊಳಚೆ ಮಂಡಳಿ ಅಧಿಕಾರಿಗೆ ಎಚ್ಚರಿಕೆ ನೀಡಿದರು.
ಮಿಮ್ಸ್‌ನಲ್ಲಿ ಹಲವಾರು ಸಮಸ್ಯೆಗಳಿವೆ. ಬಹುಮುಖ್ಯವಾಗಿ ಪಕ್ಕದಲ್ಲಿರುವ ತಮಿಳು ಕಾಲನಿ ನಿವಾಸಿಗಳ ಸ್ಥಳಾಂತರ ಆಗಬೇಕಿದೆ. ಅದಕ್ಕಾಗಿ ಚಿಕ್ಕಮಂಡ್ಯ ಬಳಿ ನಿರ್ಮಿಸಿರುವ ಮನೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ ತಕ್ಷಣ ಸ್ಥಳಾಂತರ ಮಾಡಬೇಕು. ಮನೆಗಳಿಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ಸಂಬಂಧಿಸಿದ ಗುತ್ತಿಗೆದಾರರಿಂದ ಮಾಡಿಸಿ ಜಿಲ್ಲಾಕಾರಿಗೆ ವರದಿ ಸಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ. ಕೇವಲ 450 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಾಗಿದ್ದು, ಇದನ್ನು 1 ಸಾವಿರ ಹಾಸಿಗೆಗಳಿಗೆ ಹೆಚ್ಚಿಸಬೇಕಾಗಿದೆ. ಇರುವ ವ್ಯವಸ್ಥೆಯೊಳಗೆ ಅಲ್ಲಿನ ವೈದ್ಯರು ಮತ್ತು ಸಿಬ್ಬಂದಿ 1 ಸಾವಿರ ಒಳ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲೇ ವ್ಯವಹರಿಸಿ ಉನ್ನತೀಕರಿಸುವ ಚಿಂತನೆ ಮಾಡಿದ್ದೇವೆ. ಇದಕ್ಕೆ ಎಲ್ಲ ಶಾಸಕರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಶಾಸಕರಾದ ರವಿಕುಮಾರ್ ಗಣಿಗ, ರಮೇಶ ಬಂಡಿಸಿದ್ದೇಗೌಡ, ಎಚ್.ಟಿ.ಮಂಜುನಾಥ್, ಎಂಎಲ್‌ಸಿ ದಿನೇಶ್ ಗೂಳೀಗೌಡ, ಮಧು ಜಿ.ಮಾದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿ.ಪಂ ಸಿಇಒ ಶೇಖ್ ತನ್ವೀರ್ ಆಸ್ೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಇದ್ದರು.