

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರದ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ನಾಗಮಂಗಲ ತಾಲೂಕಿನಲ್ಲಿ ಜಲಸೂರು ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಧ್ಯದ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಮುಖ್ಯ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರ ಆದೇಶ ಬರುವ ಆಶಾಭಾವನೆ ಇತ್ತು. ಆದರೆ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಿರುವುದರಿಂದ ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡಲು ಕಷ್ಟವಾಗುತ್ತದೆ. ಈ ಹಿನ್ನಲೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸುವ ಪ್ರಯತ್ನವನ್ನು ಮತ್ತೆ ನಮ್ಮ ವಕೀಲರ ಮಾಡಲಾಗುವುದು ಎಂದರು.
ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಸಧ್ಯ ಸಂಗ್ರಹವಾಗಿರುವ ನೀರು ಕುಡಿಯುವುದಕ್ಕೆ ಮಾತ್ರ ಲಭ್ಯವಾಗಿದ್ದು, ರೈತರ ಬೆಳೆಗಳಿಗೂ ನೀರು ಬಿಡದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯ ತಲುಪಿದ್ದು, ಈ ಬಗ್ಗೆ ಪ್ರಾಧಿಕಾರದ ಗಮನ ಸೆಳೆಯುವ ಪ್ರಯತ್ನ ಮುಂದುವರೆಸಲಾಗುವುದು ಎಂದರು.