ವಿದ್ಯಾರ್ಥಿ ಸಾವು ಪ್ರಕರಣ ತನಿಖೆಗೆ ಸೂಚನೆ: ಮಕ್ಕಳ ಆರೋಗ್ಯ ವಿಚಾರಿಸಿದ ಸಚಿವ ಚಲುವರಾಯಸ್ವಾಮಿ

Minister CRS inquired about child health Mandya
Published on

ಮಂಡ್ಯ: ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್ನಲ್ಲಿ ಊಟ ಸೇವಿಸಿ ಒರ್ವ ವಿದ್ಯಾರ್ಥಿ ಮೃತಪಟ್ಟು, ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು.

ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಮೇಘಾಲಯದಿಂದ ಮಕ್ಕಳನ್ನು ಕರೆತರಲಾಗಿದೆ. ಆದರೆ ಈ ಪ್ರಕ್ರಿಯೆ ಕಾನೂನು ವ್ಯಾಪ್ತಿಯಲ್ಲಿ ಅನುಮತಿ ಪಡೆಯಲಾಗಿತ್ತೆ ಎನ್ನುವುದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಅಲ್ಲಿ ಸಾಕಷ್ಟು ತಪ್ಪು ನಡೆದಿದೆ ಎಂದರು.

ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಸೂಚನೆ ನೀಡಿದ್ದೇನೆ. ಮೃತ ಮಗುವಿನ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಸರ್ಕಾರಕ್ಕೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಸಂಬಂಧಿಸಿದಂತೆ ಚಿಕಿತ್ಸಾ ವೆಚ್ಚವನ್ನು ನಾವೇ ಭರಿಸಲಿದ್ದೇವೆ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net