

ಯಾದಗಿರಿ : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಏಪ್ರಿಲ್ 25 ಮತ್ತು 26 ಹಾಗೂ 28 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ
ಏಪ್ರಿಲ್ 25ರ ಶುಕ್ರವಾರ ರಂದು ಬೆಳಿಗ್ಗೆ 8.30 ಗಂಟೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಸುರಪುರ ತಾಲ್ಲೂಕು ಮಳಳ್ಳಿ ಗ್ರಾಮದಲ್ಲಿ ಶ್ರೀ ಮಾಳಿಂಗರಾಯ ಮತ್ತು ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಶಹಾಪೂರದಲ್ಲಿ ಸಾರ್ವಜನಿಕರ ಕುಂದುಕೊರತೆ ವಿಚಾರಣೆ ಆಲಿಸುವರು ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ತದನಂತರ ಸಂಜೆ 5 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
ಏಪ್ರಿಲ್ 26ರ ಶನಿವಾರ ರಂದು ಬೆಳಿಗ್ಗೆ 9 ಗಂಟೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10.30 ಗಂಟೆಗೆ ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆ ರಸ್ತೆ (Grand launching ceremony) ಶಾಹೀನ್ ಮಿಷನ್ ಪಿ.ಯು. ಕಾಲೇಜ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12.30 ಗಂಟೆಗೆ ಶಹಾಪೂರದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಆಲಿಸುವರು. ತದನಂತರ ಸಂಜೆ 5 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
2025ರ ಏಪ್ರಿಲ್ 28ರ ಸೋಮವಾರ ರಂದು ಬೆಳಿಗ್ಗೆ 10 ಗಂಟೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 11 ಗಂಟೆಗೆ ಶಹಾಪೂರ ಆಗಮಿಸಿ, ಶಹಾಪೂರ ಅರಬೋಳ ಕಲ್ಯಾಣ ಮಂಟಪದಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಹಾಪೂರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಶಿವಮಾಂತಪ್ಪ ಸಾಹು, ಹಾಗೂ ಕೆಂಭಾವಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಬಸನಗೌಡ ಇವರಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಆಲಿಸುವರು. ನಂತರ ಸಂಜೆ 5 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು. ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.