ದಕ್ಷಿಣ ಕನ್ನಡ ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

IMG-20240802-WA0104
Published on

ಮಂಗಳೂರು: ಭಾರೀ ಮಳೆಯಿಂದ ಮುಳುಗಡೆಯಾದ ಮಂಗಳೂರು ಹಾಗೂ ಆಸುಪಾಸಿನ ವಿವಿಧ ಸ್ಥಳಗಳಿಗೆ ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರವ್ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು.

ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವರು, ಸಂತ್ರಸ್ತ
ಅಕ್ಕ ಪಕ್ಕದ ಗ್ರಾಮಗಳ ಜನರ ಜತೆ ಸಮಾಲೋಚನೆ ನಡೆಸಿದರು.

ಪ್ರತಿ ವರ್ಷ ಅದ್ಯಪಾಡಿಯಲ್ಲಿ ಪಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಸ್ಥಳೀಯರು ಸಚಿವರಿಗೆ ಮಾಹಿತಿ ನೀಡಿದರು.

ತೋಟ ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಪಲ್ಗುಣಿ ನದಿ ನೆರೆ ಹಾವಳಿ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರಿದಿ ಪಡೆದು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಪ್ರವಾಹ ಬಂದಿರುವ ಈ ಸಂದರ್ಭದಲ್ಲಿಯೇ ತಂತ್ರಜ್ಞರನ್ನ ಸ್ಥಳಕ್ಕೆ ಕರೆತನ್ನಿ.

ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ನಿವಾಸಿಗರು

ನೆರೆ ಪರಿಹಾರ ತೆಗೆದುಕೊಳ್ಳುವಂತೆ ನಿವಾಸಿಗರಿಗೆ ಮನವಿ ಮಾಡಿದ ಸಚಿವ ದಿನೇಶ್ ಗುಂಡೂರಾವ್..

ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ.

ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೊಂದು ಲಿಂಕ್ ಮಾಡುವ ಅಗತ್ಯವಿಲ್ಲ. ಭತ್ತದ ಗದ್ದೆ ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ.. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ಸಚಿವರು ರೈತರಲ್ಲಿ ಮನವಿ ಮಾಡಿದರು.

ಸಚಿವರ ಮನವಿಗೆ ಸ್ಥಳೀಯ ನಿವಾಸಿಗರು ಒಪ್ಪಿಗೆ ಸೂಚಿಸಿದರು.

ಸ್ಥಳೀಯ ನಿವಾಸಿಗಳು ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ತಿರಸ್ಕರಿಸುತ್ತಾ ಬಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net