ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೆ.16 ಮತ್ತು 17 ರಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ

DR HC MAHADEVAPPA
Published on

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸೆ.16 ರಂದು ಬೆಳಗ್ಗೆ 10 ಗಂಟೆಗೆ ಟಿ.ನರಸೀಪುರದಲ್ಲಿ ಶಿಕ್ಷಣ ಇಲಾಖೆಯವರು ಏರ್ಪಡಿಸಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2:00 ಗಂಟೆಗೆ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಏರ್ಪಡಿಸಿರುವ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

 ಸೆಪ್ಟೆಂಬರ್ 17 ರಂದು ಮೈಸೂರು ಜಿಲ್ಲಾಡಳಿತದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಏರ್ಪಡಿಸಿರುವ ವಿಶ್ವಕರ್ಮ ಜಯಂತಿಯಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net