

ಧಾರವಾಡ: ಬೆಳಗಾವಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಬಾಕಿ ಇರುವ ಮತ್ತು ಘಟಿಸುವ ದೌರ್ಜನ್ಯ ಪ್ರಕರಣಗಳನ್ನು ಸಂವೇದನೆಯಿAದ ವರ್ತಿಸಿ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಡಿಸಿ, ಎಸ್‌ಪಿಗಳು ಶ್ರಮಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಮಾಜ ಕಲ್ಯಾಣ ಇಲಾಖೆ ಯೋಜನೆಗಳ ಕುರಿತು ಬೆಳಗಾವಿ ವಿಭಾಗದ ಜಿಲ್ಲೆಗಳ ಜಿಲ್ಲಾಽಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳು ಮತ್ತು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಽಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಅಟ್ರಾಸಿಟಿ ಪ್ರಕರಣಗಳ ವಿಲೇವಾರಿ ಸಮಂಜಸವಾಗುತ್ತಿಲ್ಲ. ದೌರ್ಜನ್ಯ ಪ್ರಕರಣಗಳಲ್ಲಿ ಜಿಲ್ಲಾಽಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ತಡೆ ಅಽನಿಯಮದ ಅನುಷ್ಠಾನದಲ್ಲಿ ಅಽಕಾರಿಗಳು ಕಾಳಜಿ ವಹಿಸಬೇಕು. ಸಂಬAಧಪಟ್ಟ ಅಽಕಾರಿಗಳು ಕಾಲಕಾಲಕ್ಕೆ ಸಭೆ ನಡೆಸಬೇಕು ಎಂದರು.
ನಕಲಿ ಜಾತಿ ಪ್ರಮಾಣಪತ್ರ ಕಂಡುಬAದಲ್ಲಿ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು. ಸಂಬAಽಸಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಅನುಕಂಪ ಆಧಾರಿತ ನೌಕರರಿಗೆ ಅಗತ್ಯ ದಾಖಲಾತಿಗಳನ್ನು ಜಿಲ್ಲಾಽಕಾರಿಗಳು ಇತರ ಇಲಾಖೆಗಳಿಂದ ಸಕಾಲದಲ್ಲಿ ಪೂರೈಸಲು ಕ್ರಮ ವಹಿಸಬೇಕು ಎಂದರು.
ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ಆಯುಕ್ತ ರಾಕೇಶಕುಮಾರ ಮತ್ತು ರಾಜ್ಯ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಗಳ ರಾಜ್ಯ ಸಲಹಾ ಸಮಿತಿ ಸದಸ್ಯ ಹಾಗೂ ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಇ. ವೆಂಕಟಾಚಲ, ಇತರರಿದ್ದರು.