

ಧಾರವಾಡ: ಶೈಕ್ಷಣಿಕ ಹಬ್ ಆಗಿರುವ ಧಾರವಾಡ ಜಿಲ್ಲೆಗೆ ಇನ್ನಷ್ಟು ವಸತಿ ನಿಲಯಗಳ ನಿರ್ಮಾಣಕ್ಕೆ ಅನುದಾನ, ಅನುಮೋದನೆ ನೀಡಲಾಗುವುದು. ಇಲಾಖೆಯ ಅಪರ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಬೇಕು. ವಿಭಾಗ ವ್ಯಾಪ್ತಿಯ ಜಿಲ್ಲೆಗಳಲ್ಲಿ ಇಲಾಖೆಯಿಂದ ನಿರ್ಮಿಸುತ್ತಿರುವ ವಸತಿ ನಿಲಯದ ಕಟ್ಟಡಗಳ ಗುಣಮಟ್ಟ ಕಾಪಾಡಬೇಕು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಗಮ, ಮಂಡಳಿ, ಆಯೋಗಗಳಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ವಿಭಾಗದ ೭ ಜಿಲ್ಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ಊಟ, ಶೈಕ್ಷಣಿಕ ಸೌಲಭ್ಯ ಮತ್ತು ಮೂಲ ಸೌಕರ್ಯ ಕಲ್ಪಿಸಲು ವಾರ್ಡನ್ ಮತ್ತು ಅಽÃಕ್ಷಕರು ಶ್ರಮಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮ ಮುಂದುವರಿದಿದೆ. ಪ್ರಗತಿ ಕಾಲನಿ ಯೋಜನೆಯಡಿಯ ವಿವಿಧ ಕಾಮಗಾರಿಗಳನ್ನು ಕೈಗೊಂಡು ಅನುದಾನ ಬಿಡುಗಡೆ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಜನಾಂಗದವರಿಗೆ ಸ್ಮಶಾನ ಭೂಮಿ ಖರೀದಿಸಿ, ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಅನುದಾನಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.
ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಕಾಪಾಡಲು ಅಗತ್ಯ ಅನುದಾನ ಮತ್ತು ಯೋಜನೆಗೆ ತಿದ್ದುಪಡಿ ತರಲಾಗುವುದು. ೩೪೩ ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗಿದಎ. ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಕಡಿಮೆ ಇದೆ. ಡಿಆರ್‌ಸಿ ಕಾಯ್ದೆಗೆ ತಿದ್ದುಪಡಿ ತಂದು ನಾಗರಿಕ ಹಕ್ಕು ಪೊಲೀಸರಿಗೆ ಎಫ್‌ಐಆರ್ ಹಾಗೂ ತನಿಖೆಯ ಕುರಿತು ಹೆಚ್ಚಿನ ಅಽಕಾರ ನೀಡಲು ಸರ್ಕಾರ ನಿರ್ಧರಿಸಿದೆ ಎಂದರು.
ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಇಲಾಖೆಯ ಅಽಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಅನ್ಯಾಯಕ್ಕೆ ಒಳಗಾದವರಿಗೆ ಪರಿಹಾರ ಮತ್ತು ನ್ಯಾಯ ಒದಗಿಸಲು ಪ್ರಯತ್ನಿಸಬೇಕು ಎಂದರು.
ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಧಾರವಾಡ ಜಿಲ್ಲೆಗೆ ವಿದ್ಯಾರ್ಥಿಗಳ ವಸತಿ ನಿಲಯದ ಬೇಡಿಕೆ ಇದ್ದು, ನಿರ್ಮಾಣಕ್ಕೆ ಅನುದಾನ ನೀಡಬೇಕು ಎಂದು ಕೋರಿದರು.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ಆಯುಕ್ತ ರಾಕೇಶಕುಮಾರ ಮತ್ತು ರಾಜ್ಯ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಗಳ ರಾಜ್ಯ ಸಲಹಾ ಸಮಿತಿ ಸದಸ್ಯ ಹಾಗೂ ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಇ. ವೆಂಕಟಾಚಲ, ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಬೆಳಗಾವಿ ವಿಭಾಗದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಉಪ ಪೊಲೀಸ್ ವರಿಷ್ಠಾಽಕಾರಿ ರವೀಂದ್ರ ಗಡಾದ, ಎಸ್‌ಪಿ ಡಾ. ಗೋಪಾಲ ಬ್ಯಾಕೋಡ ಇದ್ದರು.