ಇಂದು ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಭೇಟಿ

Published on

ಬಳ್ಳಾರಿ : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅ.05 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆವರಣದಲ್ಲಿ ಏರ್ಪಡಿಸಿರುವ ಇಂಕ್ಯುಬೇಶನ್ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 12.30 ಕ್ಕೆ ನಗರದ ಬಿಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ ಹೊಸಪೇಟೆಗೆ ತೆರಳಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net