ನಾಳೆಯಿಂದ ರಾಜ್ಯ ಬಿಜೆಪಿ ವಿಶೇಷ ಸಭೆ

1 smg 1
Published on

ಶಿವಮೊಗ್ಗ: ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಜ.2 ಮತ್ತು 3ರಂದು ನಡೆಯುವ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೈಗೊಳ್ಳಬೇಕಾದ ಯೋಜನೆಗಳು, ಪಕ್ಷ ಸಂಘಟನೆಯ ಮಾಗೋಪಾಯ ಸೇರಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಹಿಂದಿನ ವಿಶೇಷ ಸಭೆಯಲ್ಲಿ ಗೋಹತ್ಯೆ ನಿಷೇಧ ಕುರಿತು ಸಮಾಲೋಚನೆ ಮಾಡಲಾಗಿತ್ತು. ಅದಾದ ಕೆಲ ದಿನಗಳಲ್ಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನ ಪ್ರಕ್ರಿಯೆ ಆರಂಭಗೊಂಡಿತು. ಲವ್ ಜಿಹಾದ್ ಕುರಿತಂತೆ ಮುಂದಿನ ದಿನಗಳಲ್ಲಿ ಕಠಿಣ ಕಾಯ್ದೆ ಅನುಷ್ಠಾನ ಕುರಿತು ಶಿವಮೊಗ್ಗದಲ್ಲಿ ನಡೆಯುತ್ತಿರುವ ವಿಶೇಷ ಸಭೆಯಲ್ಲಿ ರ್ಚಚಿಸುವ ಸಾಧ್ಯತೆ ಇದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತಪರವಾಗಿ ಆಡಳಿತ ನಡೆಸುತ್ತಿವೆ. ಅಡಕೆ ಬೆಳೆಗಾರರ ರಕ್ಷಣೆಗೆ ಬಿಜೆಪಿ ಸದಾ ಸಿದ್ಧವಿದೆ. ಅಡಕೆ ಬೆಳೆಗಾರರ ಹಿತರಕ್ಷಣೆಗೆ ಸಂಬಂಧಿಸಿ ರಾಜ್ಯ ವಿಶೇಷ ಸಭೆಯಲ್ಲಿ ರ್ಚಚಿಸಲಾಗುವುದು. ಅಡಕೆ ಬೆಳೆಗಾರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತವೆ ಎಂದು ಭರವಸೆ ನೀಡಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಎಂ.ಬಿ.ಭಾನುಪ್ರಕಾಶ್, ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net