ಸಂತಿಬಸ್ತವಾಡದಲ್ಲಿ ಸಚಿವೆ ಶಾಂತಿ ಸಭೆ

laxmi2
ಬೆಳಗಾವಿಯ ಸಂತಿಬಸ್ತವಾಡದಲ್ಲಿ ನಡೆದ ಶಾಂತಿ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.
Published on

ಬೆಳಗಾವಿ: ಸೋಮವಾರ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಗಳವಾರ ಸಂಜೆ ತಾಲೂಕಿನ ಸಂತಿಬಸ್ತವಾಡ ಗ್ರಾಮಕ್ಕೆ ಭೇಟಿ ನೀಡಿ, ಶಾಂತಿ ಸಭೆ ನಡೆಸಿದರು.

ಬೆಂಗಳೂರಿನಿಂದ ಆಗಮಿಸಿದ ಸಚಿವರು, ವಿಮಾನ ನಿಲ್ದಾಣದಿಂದ ನೇರವಾಗಿ ಗ್ರಾಮಕ್ಕೆ ತೆರಳಿ, ಘಟನೆಯ ಮಾಹಿತಿ ಪಡೆದು, ಶಾಂತಿಯಿಂದ ಇರುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಜತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಅಕಾರಿಗಳು, ಗ್ರಾಮದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net