

ಬೆಳಗಾವಿ: ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಲು ಪಾಲಿಕೆ ಅಧಿಕಾರಿಗಳಿಗೆ 3 ತಿಂಗಳು ಕಾಲವಕಾಶ ನೀಡಲಾಗಿದೆ. ಆದರೂ, ಬದಲಾಗದಿದ್ದರೆ ವರ್ಗಾವಣೆ ಖಚಿತ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಎಚ್ಚರಿಕೆ ನೀಡಿದರು.
ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವರು, ತಕ್ಷಣ ವರ್ಗಾವಣೆ ಮಾಡಿದರೆ ಅಭಿವೃದ್ಧಿ ಕೆಲಸಗಳಿಗೆ ಸಮಸ್ಯೆ ಆಗುತ್ತದೆ. ಎಲ್ಲ ವಿಭಾಗದ ಅಧಿಕಾರಿಗಳಿಗೆ ಬದಲಾಗಲು ಮೂರು ತಿಂಗಳ ಕಾಲ ಅವಕಾಶ ನೀಡೋಣ. ಒಂದು ಅಧಿಕಾರಿಗಳು ತಮ್ಮ ಕಾರ್ಯವೈಖರಿ ಬದಲಾಯಿಸಿಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ವರ್ಗಾವಣೆ ಜತೆಗೆ ಕಠಿಣ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.