ಬೆಳಗಾವಿ ಮಹಾನಗರದಲ್ಲಿ ಮೇಲ್ಸೆತುವೆ ನಿರ್ಮಾಣಕ್ಕೆ ಸಮ್ಮತಿ!

IMG-20231212-WA0080.jpg
Published on


-ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ
ಬೆಳಗಾವಿ: ಬೆಳಗಾವಿಗರ ಬಹುದಿನಗಳಿಂದ ಕನಸಾಗಿಯೇ ಉಳಿದಿರುವ ಮೇಲ್ಸೆತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಹೊಸ ವರ್ಷದ ಆರಂಭದಲ್ಲಿ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಹೆಚ್ಚಿದೆ.
ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರಿಗೆ ಭೇಟಿಮಾಡಿ ಸಲ್ಲಿಸಿದ ಅಭಿವೃದ್ಧಿ ಕಾಮಗಾರಿಗಳ ಪೈಕಿ ಬೆಳಗಾವಿ ಮಹಾನಗರದಲ್ಲಿ ಎರಡು ಮೇಲ್ಸೆತುವೆ ನಿರ್ಮಾಣ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಕ್ರೀಡಾಂಗಣ  ನಿರ್ಮಾಣಕ್ಕೆ ಸಮ್ಮತಿಸಿದ್ದಾರೆ. ಅಲ್ಲದೆ ಈ ಯೋಜನೆಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net