ಸಂಗೋಳ್ಳಿ ರಾಯಣ್ಣ ಸೈನಿಕ ಶಾಲೆಗೆ ಸಚಿವ ಶಿವರಾಜ ತಂಗಡಗಿ ಭೇಟಿ

IMG-20231214-WA0016.jpg
Published on


ಬೆಳಗಾವಿ: ಬೈಲಹೊಂಗಲ ತಾಲೂಕಿನ ವ್ಯಾಪ್ತಿಯ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆಗೆ ಗುರುವಾರ ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆ‌ ಸಚಿವ‌ ಶಿವರಾಜ್ ತಂಗಡಗಿ‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಮಹಾಂತೇಶ ಕೌಜಲಗಿ ಸಾಥ್ ನೀಡಿದರು.
ಈ ವೇಳೆ ಸಚಿವರು, ಭೋಜನಾಲಯ, ಗ್ರಂಥಾಲಯ, ಶಿಕ್ಷಕರ ವಸತಿ ಗೃಹ, ಆಡಿಟೋರಿಯಂ ಹಾಗೂ ಕೆಲಸಗಾರರು ಉಳಿದುಕೊಳ್ಳಲು ಹೈಟೆಕ್ ವಸತಿ ಗೃಹ ಹಾಗೂ 30ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಬೃಹತ್  ಒಳಾಂಗಣ ಮತ್ತು ಹೊರಾಂಗಣದಲ್ಲಿ ಬರುವ ಈಜುಕೊಳ, ಹಾರ್ಸ್ ರೈಡಿಂಗ್, ಹಾಕಿ, ಕಬಡ್ಡಿ, ವಾಲಿಬಾಲ್ ಕೋರ್ಟ್ ಗೆ ಭೇಟಿ ನೀಡಿ ಅಲ್ಲಿನ‌ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.‌
ಗುಣಮಟ್ಟದ ಶಿಕ್ಷಣ ಮುಖ್ಯ. ‌ಶಾಲೆಯಲ್ಲಿ ಯಾವುದೇ ಮೂಲಸೌಲಭ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.‌

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net