ಜೈನ ಮುನಿಗಳ ಹತ್ಯೆ;ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಂಡನೆ

IMG-20230708-WA0005.jpg
Published on

ಬೆಳಗಾವಿ: ಟಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ ೧೦೮ ಕಾಮಕುಮಾರ ನಂದಿ ಮಹಾರಾಜರ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಮಾನುಷ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಹಿಂಸೆಯನ್ನು ಬೋಧಿಸುವ ಜೈನ ಧರ್ಮ ಇಡೀ ಮನುಕುಲಕ್ಕೆ ಆದರ್ಶವಾಗಿದೆ. ಅಂತಹ ಧರ್ಮದ ಮುನಿಗಳನ್ನು ಹತ್ಯೆ ಮಾಡಿರುವುದು ತೀವ್ರ ನೋವನ್ನು ಉಂಟು ಮಾಡಿದೆ. ಅವರ ಸದ್ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಜೊತೆಗೆ, ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವಂತಾಗಬೇಕು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net