ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಪರಿಶೀಲನೆ:ಸಚಿವ ಜಾರಕಿಹೊಳಿ ಭರವಸೆ

IMG-20230807-WA0021.jpg
Published on

ನಗರದಲ್ಲಿ ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವ ಕುರಿತು ಸರ್ಕಾರ ಮಟ್ಟದಲ್ಲಿ ನಿರ್ಧಾರ ಆಗಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದುೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ಜರುಗಿದ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣೇಶೋತ್ಸವ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದAತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸಬೇಕು.ಹೊಂಡಗಳ ಸ್ವಚ್ಛತೆ, ರಸ್ತೆ ದುರಸ್ತಿ, ವಿದ್ಯುತ್ ತಂತಿಗಳ ತೆರವು, ಪೊಲೀಸ್ ಭದ್ರತೆ ಮತ್ತಿತರ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಽಕಾರಿಗಳಿಗೆ ಸೂಚಿಸಿದರು.
ಗಣೇಶೋತ್ಸವ ಮಂಡಳಿಯವರು ಕೂಡ ನಿಗದಿತ ಅವಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಆದಷ್ಟು ಬೇಗನೇ ವಿಸರ್ಜನೆಗೆ ಸಹಕರಿಸಬೇಕು. ಮೆರವಣಿಗೆ ವೀಕ್ಷಣೆಗೆ ಆಗಮಿಸುವ ಮಹಿಳೆಯರಿಗೆ ಅನುಕೂಲವಾಗುವಂತೆ ಪ್ರತಿ ೨೦೦ ಮೀಟರ್‌ಗೊಂದರAತೆ ಮಹಿಳಾ ಶೌಚಗೃಹಗಳನ್ನು ನಿರ್ಮಿಸಬೇಕು. ಏನೇ ಸಮಸ್ಯೆಗಳಿದ್ದರೆ ಅಽಕಾರಿಗಳ ಗಮನಕ್ಕೆ ತರಬೇಕು. ಬಗೆಹರಿಯದಿದ್ದರೆ ತಮ್ಮ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಜಿಲ್ಲಾಽಕಾರಿ ನಿತೇಶ ಪಾಟೀಲ ಮಾತನಾಡಿ,  ಗಣೇಶೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಪಾಲಿಕೆಯಲ್ಲಿ ಒಂದು ಕೋಟಿ ರೂ.ಅನುದಾನ ತೆಗೆದಿರಿಸಲಾಗಿದೆ.ಗಣೇಶೋತ್ಸವ ಮಂಡಳಿಗಳಿಗೆ ಪರವಾನಿಗೆ ನೀಡಲು ಅನುಕೂಲವಾಗುವಂತೆ ಎಂಟು ಪೊಲೀಸ್ ಠಾಣೆಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗುತ್ತಿದೆ. ಮೆರವಣಿಗೆ ವೀಕ್ಷಿಸಲು ಅನುಕೂಲವಾಗುವಂತೆ ದೊಡ್ಡ ಗ್ಯಾಲರಿ ನಿರ್ಮಿಸಲಾಗುವುದು.ಮೆರವಣಿಗೆ ಸಾಗುವ ಮಾರ್ಗವನ್ನು ಪರಿಶೀಲಿಸಿ ಸುಗಮ ಮೆರವಣಿಗೆಗೆ ಅಗತ್ಯ ವ್ಯವಸ್ಥೆ ಮತ್ತು ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net