ಉಸ್ತುವಾರಿ ಸಚಿವರು ಬದಲು, ದ.ಕ.ಕ್ಕೆ ಸುನೀಲ್, ಉಡುಪಿಗೆ ಅಂಗಾರ

minister
Published on

ಮಂಗಳೂರು: ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಆದೇಶ ಹೊರಡಿಸಿದ್ದಾರೆ.

ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಜವಾಬ್ದಾರಿ ಎಸ್. ಅಂಗಾರ ಅವರಿಗೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ವಿ.ಸುನೀಲ್ ಕುಮಾರ್ ಅವರಿಗೆ ಇತ್ತು.

ಹೊಸ ಆದೇಶದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ವಿ.ಸುನೀಲ್ ಕುಮಾರ್ ಅವರನ್ನು ನೇಮಿಸಲಾಗಿದೆ.

ಅದೇ ರೀತಿ ಉಡುಪಿ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಎಸ್.ಅಂಗಾರ ಅವರನ್ನು ನೇಮಿಸಲಾಗಿದೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net