ನೆರೆಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ

28 ckm 7
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಮಳೆಹಾನಿ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕಿ ನಯನಾ ಮೋಟಮ್ಮ, ಡಿಸಿ ಮೀನಾನಾಗರಾಜ್, ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ೨೦ ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದರಿಂದ ಮಲೆನಾಡು ಭಾಗದ ತಾಲೂಕುಗಳಾದ ಮೂಡಿಗೆರೆ, ಶೃಂಗೇರಿ, ಕಳಸ, ಕೊಪ್ಪ, ಎನ್.ಆರ್.ಪುರ ಭಾಗದಲ್ಲಿ ಭಾರಿ ಹಾನಿ ಸಂಭವಿಸಿದೆ. ಹತ್ತಾರು ಮನೆಗಳು ಧರೆಗುರುಳಿದ್ದು, ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್‌ಪಿ ವಿಕ್ರಮ ಅಮಟೆ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿವಿಧ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು ಸಂತ್ರಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಜಿಲ್ಲೆಯ ಕುನ್ನಹಳ್ಳಿ, ಹವಳ್ಳಿ, ಚಂಡುಗೋಡು, ಅರೆನೂರು ಕಾಳಜಿ ಕೇಂದ್ರ, ಶೃಂಗೇರಿಯ ಉತ್ತಿನ ಗದ್ದೆ, ಬಸರಿಕಟ್ಟೆ, ನಾರ್ವೆ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಆದ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು. ಮಳೆಯಿಂದ ಮನೆ ಕಳೆದುಕೊಂಡವರಿಗೆ ಕೂಡಲೇ ಮೊದಲ ಕಂತಿನ ಪರಿಹಾರ ನೀಡುವ ಜೊತೆಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆ ಮಂಜೂರು ಮಾಡುವಂತೆ ಸಚಿವ ಕೆ.ಜೆ.ಜಾರ್ಜ್ ಡಿಸಿ ಮೀನಾ ನಾಗರಾಜ್ ಅವರಿಗೆ ಸೂಚನೆ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಕಂಡರಿಯದAಥ ಮಳೆ ಬಂದಿದೆ. ಮಳೆಯೊಂದಿಗೆ ಗಾಳಿಯೂ ರಭಸವಾಗಿ ಬೀಸುತ್ತಿರುವುದರಿಂದಾಗಿ ಹಾನಿಯ ಪ್ರಮಾಣ ಹೆಚ್ಚಾಗಿದೆ. ಈಗಾಗಲೇ ಮನೆ ಕಳೆದುಕೊಂಡವರಿಗೆ ಬದಲಿ ವ್ಯವಸ್ಥೆ ಮಾಡಿz್ದೆÃವೆ. ಅವರಿಗೆ ಪರಿಹಾರ ನೀಡುವ ಜೊತೆಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಮನೆಯನ್ನು ಮಂಜೂರು ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಮಾಡಿದೆ ಎಂದು ಹೇಳಿದರು.
ಮಲೆನಾಡು ಭಾಗದಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಲೈನ್‌ಗಳು ಹಾಗೂ ಕಂಬಗಳಿಗೆ ತೀವ್ರ ಹಾನಿಯಾಗಿದೆ. ಇದನ್ನು ಸರಿಪಡಿಸಲು ಕೆಲ ಸಮಯ ಬೇಕಾಗುತ್ತದೆ. ಕಾಡಿನ ಮಧ್ಯೆ ವಿದ್ಯುತ್ ಲೈನ್‌ಗಳಿಗೆ ಹಾನಿಯಾಗಿರುವುದರಿಂದ ಅಲ್ಲಿಗೆ ತೆರಳಿ ಸರಿಪಡಿಸುವುದು ಕಷ್ಟವಾಗುತ್ತಿದೆ. ಹೀಗಾಗಿ ಮಲೆನಾಡು ಭಾಗಕ್ಕೆ ೫೫೦ ಲೈನ್‌ಮನ್‌ಗಳು ಇದ್ದರು. ಈಗಾಗಲೇ ಬಯಲುಸೀಮೆ ಭಾಗದ ಲೈನ್‌ಮನ್‌ಗಳನ್ನೂ ಮಲೆನಾಡು ಭಾಗಕ್ಕೆ ನಿಯೋಜಿಸಲಾಗಿದೆ. ಅಗತ್ಯಬಿದ್ದರೆ ಮಂಗಳೂರು ಭಾಗದಿಂದಲೂ ಲೈನ್‌ಮನ್‌ಗಳನ್ನು ಕರೆಯಿಸಿಕೊಂಡು ಶೀಘ್ರವೇ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ದಾಖಲೆ ಇಲ್ಲದ ಮನೆಗಳೂ ಮಳೆಯಿಂದ ಬಿದ್ದಿದ್ದರೆ ಅವುಗಳಿಗೂ ಒಂದು ಲಕ್ಷ ಪರಿಹಾರ ನೀಡಲು ಕ್ಯಾಬಿನೇಟ್ ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಅಧಿಕೃತ ಆದೇಶ ಹೊರಬರುವ ಸಾಧ್ಯತೆಯಿದೆ. ಕೆಲವರು ಡೀಮ್ಡ್ ಫಾರೆಸ್ಟ್ ಹಾಗೂ ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ. ಇವರ ಬಳಿ ಮನೆಗಳಿಗೆ ಸಂಬAಧಿಸಿದAತೆ ಯಾವ ದಾಖಲೆಗಳೂ ಇಲ್ಲ. ಹೀಗಾಗಿ ಇವರಿಗೆ ಪರಿಹಾರ ನೀಡಲು ಬರುತ್ತಿರಲಿಲ್ಲ. ಮಾನವೀಯ ದೃಷ್ಟಿಯಿಂದ ಅಂಥವರಿಗೂ ಪರಿಹಾರ ನೀಡಲು ಕ್ರಮ ಕೈಗೊಂಡಿರುವುದಾಗಿ ಮಾಹಿತಿ ನೀಡಿದರು.

ಶೀಘ್ರವೇ ದುರಸ್ತಿಕಾರ್ಯ
ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸಿವೆ. ಇದಲ್ಲದೆ ರಸ್ತೆಗಳಿಗೂ ಹಾನಿಯಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಫಂಡ್‌ನಿAದ ಕೂಡಲೇ ಗುಡ್ಡ ಕುಸಿತದ ಮಣ್ಣು ತೆರವು ಹಾಗೂ ರಸ್ತೆ ಹಾನಿ ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಈ ಬಾರಿ ಭಾರೀ ಮಳೆಯಾಗಿದ್ದರಿಂದ ಸಮಸ್ಯೆ ಸ್ವಲ್ಪ ಹೆಚ್ಚಾಗಿದೆ. ಭಾರೀ ಮಳೆಯ ಮುನ್ಸೂಚನೆ ಇದ್ದುದರಿಂದ ಒಂದು ತಿಂಗಳ ಹಿಂದೆಯೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಲಾಗಿತ್ತು. ಹೀಗಾಗಿ ಸಮಸ್ಯೆ ಎದುರಾದ ತಕ್ಷಣ ಸ್ಪಂದಿಸಲು ಸಾಧ್ಯವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಗುಡ್ಡ ಕುಸಿತ, ರಸ್ತೆಗಳ ಹಾನಿ ಕುರಿತಂತೆ ಜಿಲ್ಲಾಧಿಕಾರಿಗಳು ವರದಿ ಸಿದ್ಧಪಡಿಸುತ್ತಿದ್ದಾರೆ. ತುರ್ತು ಕೆಲಸಗಳನ್ನು ಇರುವ ಅನುದಾನದಲ್ಲಿ ಕೈಗೊಳ್ಳುವಂತೆ ಸೂಚಿಸಲಾಗಿದೆ. ಉಳಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಾಕಿ ಇರುವ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಭಾರಿ ಮಳೆಯಿಂದಾಗಿ ಈ ಬಾರಿ ಜಿಲ್ಲೆಯಲ್ಲಿ ಇದುವರೆಗೆ ೩೨೪ ಮನೆಗಳಿಗೆ ಹಾನಿಯಾಗಿದೆ. ಬಹುತೇಕ ಎಲ್ಲ ಮನೆಗಳಿಗೆ ದೊಡ್ಡ ಮಟ್ಟದಲ್ಲಿಯೇ ಹಾನಿ ಸಂಭವಿಸಿದ್ದು, ಈಗಾಗಲೇ ಶೇ. ೭೦ ರಷ್ಟು ಮನೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಕಳೆದವಾರ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದಾಗಿ ಹಾನಿಯ ಪ್ರಮಾಣವೂ ಹೆಚ್ಚಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಆಗಿರುವ ಹಾನಿಯ ಕುರಿತು ಪರಿಶೀಲನೆ ನಡೆಯುತ್ತಿದೆ. ಅಧಿಕಾರಿಗಳಿಂದ ಸೂಕ್ತ ಮಾಹಿತಿ ಬಂದ ಬಳಿಕ ಕಳೆದ ನಾಲ್ಕು ದಿನಗಳಲ್ಲಿ ಆಗಿರುವ ಹಾನಿಯ ಪ್ರಮಾಣ ಎಷ್ಟು ಎಂಬುದು ತಿಳಿಯಲಿದೆ. ಮಳೆಯ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ಜನ ಸಂತಸಗೊAಡಿದ್ದಾರೆ
ರಾಜ್ಯದ ಅತ್ಯಂತ ದೊಡ್ಡ ಜಲಾಶಯ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುವ ಲಿಂಗನಮಕ್ಕಿ ಜಲಾಶಯ ಭರ್ತಿಯಾಗುವ ಹಂತ ತಲುಪಿರುವುದರಿಂದ ರಾಜ್ಯದ ಜನ ಸಂತಸಗೊAಡಿದ್ದಾರೆ. ಇದರಿಂದ ಇಂಧನ ಇಲಾಖೆಗೂ ಖುಷಿಯಾಗಿದೆ. ಜನ ಸಂತಸಗೊAಡರೆ ನಮ್ಮ ಇಲಾಖೆಗೂ ಸಂತಸವಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು ಇನ್ನು ಕೆಲವೇ ಅಡಿಗಳು ಬಾಕಿಯಿದೆ. ಜಲಾಶಯಕ್ಕೆ ಭಾರಿ ಪ್ರಮಾಣದ ಒಳಹರಿವೂ ಇದೆ. ಹೀಗಾಗಿ ಶೀಘ್ರವೇ ಲಿಂಗನಮಕ್ಕಿ ಭರ್ತಿಯಾಗುವ ವಿಶ್ವಾಸವಿದೆ. ಇದೇ ವೇಳೆಗೆ ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯೂ ಗಣನೀಯವಾಗಿ ಕುಸಿದಿರುವುದು ಸಂತಸದ ಸಂಗತಿ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net