ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ; ನರೇಗಾ ಮಾನವ ದಿನ ಸೃಜನೆ ಗುರಿ ತಲುಪಲು ಗಡುವು

22 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಬಡತನ ನಿರ್ಮೂಲನೆ ಹಾಗೂ ಜಿಡಿಪಿ ಪ್ರಗತಿಗೆ ನರೇಗಾ ಯೋಜನೆ ವರದಾನವಾಗಿದೆ. ಆದರೆ, ಕಳೆದ ಆರ್ಥಿಕ ವರ್ಷದಲ್ಲಿ ಮಾನವ ದಿನಗಳ ಸೃಜನೆಯ ಸಾಧನೆ ತೃಪ್ತಿದಾಯಕವಾಗಿಲ್ಲ. ಆದ್ದರಿಂದ ಜಿಲ್ಲಾ ಪಂಚಾಯಿತಿ ಅಡಿ ನರೇಗಾ ಅನುಷ್ಠಾನ ಇಲಾಖೆಗಳು ಸಮನ್ವತೆಯಿಂದ ಕೆಲಸ ಮಾಡಬೇಕು. ಪ್ರಸಕ್ತ ವರ್ಷದಲ್ಲಿ ಮಾನವ ದಿನ ಸೃಜನೆಯಲ್ಲಿ ಜಿಲ್ಲೆ ರಾಜ್ಯದಲ್ಲಿ ಉನ್ನತ ಸ್ಥಾನದಲ್ಲಿ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಗಡುವು ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನರೇಗಾ ಅಡಿ ಉದ್ಯೋಗ ನೀಡಿ ಕಾಮಗಾರಿ ಮಾಡಿಸಿ ಮಾನವ ದಿನ ಸೃಜಿಸುವುದು ಕೇವಲ ಗ್ರಾ.ಪಂ., ತಾ.ಪಂ.ಗಳ ಕೆಲಸವಲ್ಲ. ಕೃಷಿ, ತೋಟಗಾರಿಕೆ, ಪಿಆರ್‌ಇಡಿ, ಅರಣ್ಯ, ಪಿಎಂಜಿಎಸ್‌ವೈ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಣ್ಣ ನೀರಾವರಿ ಸೇರಿ ಸಂಬ0ಧಪಟ್ಟ ಇಲಾಖೆಗಳ ಅಽಕಾರಿಗಳು ಕೈ ಜೋಡಿಸಬೇಕು. ಈ ಕುರಿತು ಜಿ.ಪಂ. ಸಿಇಒ ಅಧ್ಯಕ್ಷತೆಯಲ್ಲಿ ಸಭೆ ಜರುಗಿಸಿ ಕ್ರಿಯಾಯೋಜನೆ ರೂಪಿಸಬೇಕು ಎಂದು ಸೂಚಿಸಿದರು.

ಶಾಸಕಾರದ ಎನ್.ಎಚ್. ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಜಿಲ್ಲಾಽಕಾರಿ ದಿವ್ಯ ಪ್ರಭು, ಜಿ.ಪಂ. ಸಿಇಒ ಭುವನೇಶ ಪಾಟೀಲ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಎಸ್‌ಪಿ ಡಾ. ಗೋಪಾಲ ಬ್ಯಾಕೋಡ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ವೇದಿಕೆಯಲ್ಲಿದ್ದರು.

ಜಿಲ್ಲಾ ಕೆಡಿಪಿ ಸಭೆಯ ನಾಮ ನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಽಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net