

ರಾಯಚೂರು ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಟೇಬಲï ಟೆನ್ನಿಸ್ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಶನಿವಾರ ಲೋಕಾರ್ಪಣೆ ಮಾಡಿದರು.
ನೂತನ ಕಟ್ಟಡವನ್ನು ಉದ್ಘಾಟಿಸಿದ ಅವರು ಕ್ರೀಡಾಸಕ್ತರು ಸರ್ಕಾರ ಸೌಲಭ್ಯಗಳ ಸದುಪಯೋಗ ಪಡೆಯಬೇಕೆಂದರು. ೨೦೨೩-೨೪ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿAದ ೫೦ ಲಕ್ಷ ರೂ ಅನುದಾನದಲ್ಲಿ ಕಟ್ಟಡ ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ, ಡಾ.ಶಿವರಾಜ ಪಾಟೀಲ್, ಸಂಸದ ಜಿ.ಕುಮಾರನಾಯಕ, ಮಹಾನಗರ ಪಾಲಿಕೆ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಆಧ್ಯಕ್ಷ ಕೃಷ್ಣ ಶಾವಂತಗೇರಿ, ನ್ಯಾಯವಾದಿ ಎನ್.ಶಿವಶಂಕರ, ಯುವಜನ ಸೇವಾ ಕ್ರೀಡಾ ಇಲಾಖೆಯ ಮುಖ್ಯ ಕಾರ್ಯದರ್ಶಿ ರಣದೀಪ್, ಕ್ರೀಡಾ ಇಲಾಖೆ ಆಯುಕ್ತ ಚೇತನ್,
ಕೆಕೆಆರ್‌ಡಿಬಿ ಕಾರ್ಯದರ್ಶಿ ಎಂ.ಸುAದರೇಶ, ಜಿಲ್ಲಾಽಕಾರಿ ನಿತೀಶ್ ಕೆ.,ಜಿಪಂ ಸಿಇಓ ರಾಹುಲ್ ತುಕಾರಂ ಪಾಂಡ್ವೆ, ಎಸ್ಪಿ ಪುಟ್ಟಮಾದಯ್ಯ, ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಸೇರಿ ಅನೇಕರು ಇದ್ದರು.