ಜನತಾ ದರ್ಶನ ಸ್ಥಳ ಬದಲಾವಣೆ

Gangubayi Mankar (1)
Published on

ಕಾರವಾರ: ಸೆಪ್ಟಂಬರ್ 25 ರಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈಧ್ಯ ಅವರು ಕಾರವಾರಲ್ಲಿ ನಡೆಸುವ ಜನತಾ ದರ್ಶನದ ಸ್ಥಳ ಬದಲಾಯಿಸಲಾಗಿದೆ.

ಪೊಲೀಸ್ ಕಲ್ಯಾಣ ಮಂಟಪ ಕಾಜುಭಾಗದಲ್ಲಿ ನಿಗಧಿಪಡಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಸಾಗರ ದರ್ಶನ ಕೋಡಿಭಾಗ ಕಾರವಾರ ಇಲ್ಲಿಗೆ ಸ್ಥಳಾಂತರಿಸಲಾಗಿದೆ‌ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ನೀಡಲಾಗುವುದು ಆದ್ದರಿಂದ ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ಅರ್ಜಿ/ ಮನವಿಗಳನ್ನು ಸಲ್ಲಿಸುವ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net