

ಬೆಳಗಾವಿ: ಇಲ್ಲಿನ ಸದಾಶಿವ ನಗರದ ಲಕ್ಷ್ಮಿ ಕಾಂಪ್ಲೆಕ್ಸ್ದಿಂದ ಕ್ಲಬ್ ರಸ್ತೆಯ ವರಗಿನ ಮುಖ್ಯ ಮಾರ್ಗಕ್ಕೆ ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಹೆಸರು ನಾಮಕರಣ ಮಾಡುವಂತೆ ಪಾಲಿಕೆ ಆಯುಕ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆದೇಶಿಸಿದ್ದಾರೆ.
ಶರಣರ ಕಾಲಟ್ಟದಲ್ಲಿ ಸಮಾಜ ಸುಧಾರಣೆಗಾಗಿ ಶ್ರಮಿಸಿರುವ ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಹೆಸರನ್ನು ರಸ್ತೆಗೆ ನಾಮಕರಣ ಮಾಡುವಂತೆ ಬೆಳಗಾವಿ ರಡ್ಡಿ ಸಂ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು ಆ.16ರಂದು ಜರುಗುವ ಪರಿಷತ್ ಸಭೆಯಲ್ಲಿ ನಗರದ ಲಕ್ಷ್ಮಿ ಕಾಂಪ್ಲೆಕ್ಸ್ದಿಂದ ಕ್ಲಬ್ ರಸ್ತೆಯ ವರಗಿನ ಮಾರ್ಗಕ್ಕೆ ನಾಮಕರಣ ಮಾಡಲು ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.