ಕಾಂಗ್ರೆಸ್ ಭವನದಲ್ಲಿ ಸಚಿವ ಸತೀಶ ಜಾರಕಿಹೊಳಿ ಜನತಾದರ್ಶನ

IMG-20230816-WA0015.jpg
Published on

ಬೆಳಗಾವಿ: ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಜನತಾದರ್ಶನ ನಡೆಸಿದರು.

ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಜನರ ಸಮಸ್ಯೆಗಳನ್ನು ಆಲಿಸಿದರು. ಕೆಲವರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿದರು. ಜತೆಗೆ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ‌ ನಾವಲಗಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net