ಎಸ್.ಎಸ್. ಶೆಟ್ಟರ್ ಸೇವೆ ಸ್ಮರಿಸಿದ ಜೋಶಿ

h9-ss shetter
Published on

ಹುಬ್ಬಳ್ಳಿ: ದಿ. ಸದಾಶಿವ ಎಸ್. ಶೆಟ್ಟರ್ ಅವರ 55ನೇ ಪುಣ್ಯಸ್ಮರಣೆ ನಿಮಿತ್ತ ನಗರದ ಹಳೆಯ ಕೋರ್ಟ್ ವೃತ್ತದಲ್ಲಿರುವ ಅವರ ಪುತ್ಥಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಶನಿವಾರ ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು, ಜನಸಂಘದಿಂದ ಹುಬ್ಬಳ್ಳಿ ಕ್ಷೇತ್ರದಿಂದ ಪ್ರಥಮವಾಗಿ ಶಾಸಕರಾಗಿ ಸದಾಶಿವ ಶೆಟ್ಟರ್ ಅವರು ಆಯ್ಕೆಯಾಗಿದ್ದರು. ಈ ಭಾಗದಲ್ಲಿ ಪ್ರಬಲವಾಗಿ ಸಂಘಟನೆ ಮಾಡಿದ್ದರ ಪರಿಣಾಮವಾಗಿ ಇಂದು ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆದಿದೆ ಎಂದು ಅವರ ಸೇವೆಯನ್ನು ಸ್ಮರಿಸಿದರು.
ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ಮಜ್ಜಗಿ, ಜಿಲ್ಲಾ ವಕ್ತಾರ ರವಿ ನಾಯಕ, ಗಂಗಾಧರ ಶೆಟ್ಟರ್, ಮಾಲತೇಶ ಶ್ಯಾಗೋಟಿ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net