ಪ್ರಧಾನಿ ಮನ್ ಕೀ ಬಾತ್ ವೀಕ್ಷಣೆ

Mann ki baat
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಮರಾಠಗಲ್ಲಿಯಲ್ಲಿ ಶ್ರೀ ಶಿವರಾಯ ಯುವಕ ಮಂಡಳಿ ಪ್ರತಿಷ್ಠಾಪಿಸಿದ ಹುಬ್ಬಳ್ಳಿ ಚಾ ಮಹಾರಾಜ ಗಣೇಶ ಮಂಟಪದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ 125ನೇ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವೀಕ್ಷಿಸಿದರು.

ಪೆಹಲ್ಗಾಮ್ ಘಟನೆಯ ಬಳಿಕ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ನಿಯಂತ್ರಣಕ್ಕೆ ಬಂದಿರುವುದು, ಅಲ್ಲಿ ಸೌರಶಕ್ತಿ ಬಳಕೆಯಿಂದ 40 ಎಕರೆ ಜಮೀನಿಗೆ ನೀರಾವರಿ ಸೌಲಭ್ಯಕಲ್ಪಿಸಿರುವುದನ್ನು ಪ್ರಧಾನಿಯವರು ಪ್ರಸ್ತಾಪಿಸಿದ್ದಾರೆ. ಸ್ವದೇಶಿ ಉತ್ಪನ್ನ, ಸೇವೆಗಳ ಬಳಕೆಯಿಂದ ದೇಶದ ಆರ್ಥಿಕತೆಯನ್ನು ಗಟ್ಟಿಗೊಳಿಸಬೇಕೆಂದು ಪ್ರಧಾನಿಯವರು ಕರೆ ನೀಡಿರುವುದು ಗಮನಾರ್ಹ ಎಂದರು.

ವಿಧಾನ್ ಪರಿಷತ್ ಸದಸ್ಯ ಎಸ್. ವಿ. ಸಂಕನೂರ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಮಾಜಿ ಶಾಸಕ ಅಶೋಕ ಕಾಟವೆ, ಸತೀಶ ಶೆಜವಾಡಕರ, ಇತರರು ಇದ್ದರು. ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net