

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ವಿ.ಸೋಮಣ್ಣ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಅವರನ್ನು ನಾನು ಅಭಿನಂದಿಸುತ್ತೇನೆ. ನಮ್ಮ ಜಿಲ್ಲೆಯ ಜಿಲ್ಲೆಯ ಇತಿಹಾಸದಲ್ಲಿ ಯಾರೂ ಕೇಂದ್ರದ ಮಂತ್ರಿ ಆಗಿರಲಿಲ್ಲ, ಇವರು ಆಗಿದ್ದಾರೆ. ಸೋಮಣ್ಣ ಜನಪರ ಕೆಲಸ ಮಾಡುತ್ತಾರೆ ಅಂತ ಹೇಳುತ್ತಾರೆ ಅದನ್ನು ಸಾಧಿಸಿ ತೋರಿಸಲಿ ಎಂದು ಸವಾಲೆಸೆದರು.
ತುಮಕೂರು ರಾಯದುರ್ಗ ರೈಲ್ವೇ ಮಾರ್ಗ ಪೂರ್ಣಗೊಳಿಸಲಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಹಣ ತರಲಿ ಎಂದು ಮನವಿ ಮಾಡಿದರು.
ನರೇಂದ್ರ ಮೋದಿ ದೇಶದ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೀನಿ ಎಂದು ಎಚ್.ಡಿ.ದೇವೇಗೌಡರು 2014ರಲ್ಲಿ ಹೇಳಿಕೆ ನೀಡಿದ್ದರು. ಈಗ ನೀನೇ ಕಣಪ್ಪ ದೇಶ ಕಾಪಾಡುವನು ಎಂದು ಸ್ವಾರ್ಥಕ್ಕಾಗಿ ಊಸರವಳ್ಳಿ ಥರ ಬಣ್ಣ ಬದಲಾಯಿಸಿದ್ದಾರೆ ಎಂದು ಜೆಡಿಎಸ್ ವಿರುದ್ಧ ಹರಿಹಾಯ್ದರು.
ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಶತ್ರುಗಳ ಶತ್ರು ಮಿತ್ರರಾಗಿದ್ದಾರೆ. ಬಿಜೆಪಿ, ಜೆಡಿಎಸ್ ನಮ್ಮ ಶತ್ರಗಳು ಇಬ್ಬರೂ ಮಿತ್ರರಾಗಿ ಗೆಲುವು ಸಾಧಿಸಿದ್ದಾರೆ. ಅವರ ಈ ಮಿತ್ರತ್ವ ಎಷ್ಟು ದಿನ ಇರಲಿದೆಯೋ ನೋಡೋಣ ಎಂದರು.