

ಮೈಸೂರು: ಸಚಿವ ಸಂಪುಟದಿಂದ ಕೆಲವು ಸಚಿವರನ್ನು ಕೈ ಬಿಡಲಾಗುತ್ತದೆ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದರು.
ಸಚಿವರ ಬದಲಾವಣೆ ತೀರ್ಮಾನ ಮಾಡುವವರು ಯಾರು? ತನ್ವೀರ್ ಸೇಠ್ ಮಾಡುತ್ತಾರಾ ಅಥವಾ ನಾನು ಮಾಡುತ್ತೇನಾ? ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದರು.
ಮಳೆಯಿಂದ ಬೆಂಗಳೂರಿನಲ್ಲಿ ಸಾಕಷ್ಟು ಹಾನಿಯಾಗಿದ್ದು, ಈ ಬಗ್ಗೆ ನಮ್ಮ ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಳ್ಳಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನ ಬಗ್ಗೆ ಹೆಚ್ಚಿನ ಕಾಳಜಿ ಇದ್ದು, ಅವರು ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಹೇಳಿದರು.