

ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಬೆದರಿಕೆ ಕರೆ ಬಂದಿದೆ. ಇದರೊಂದಿಗೆ ಮೂರು ದಿನಗಳ ಅಂತರದಲ್ಲಿ ಎರಡು ಬಾರಿ ಬೆದರಿಕೆ ಬಂದಿದೆ.
ಇಟಲಿಯಿಂದ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾರೆ. ಶನಿವಾರ ರಾತ್ರಿ ಕರೆ ಮಾಡಿ ಮತ್ತೆ ಹಿಂದೂತ್ವದ ಬಗ್ಗೆ ಕೆದಕಿದ್ದಾರೆ. ಸಚಿವರ ಆಪ್ತ ಕಾರ್ಯದರ್ಶಿ ಕರೆ ಸ್ವೀಕರಿಸಿದ್ದರು ಎನ್ನಲಾಗಿದೆ.
ಕಳೆದ ಶುಕ್ರವಾರ ಮೊಬೈಲ್‌ಗೆ ಕರೆ ಮಾಡಿದ್ದ ಅಪರಿಚಿತನೊಬ್ಬ ತಮಿಳಿನಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದ. ಈಗಾಗಲೇ ಎಸ್ಪಿ ಕೆ.ಎಂ.ಶಾಂತರಾಜು ಅವರಿಗೆ ಸಚಿವರು ಮೌಖಿಕ ದೂರು ನೀಡಿದ್ದರು. ಈ ಹಿಂದೆ ದುಬೈನಿಂದಲೂ ಕರೆ ಮಾಡಿ ಬೆದರಿಕೆ ಹಾಕಿದ್ದರು.