ಜಿಲ್ಲಾ ಕೇಂದ್ರಶೀಘ್ರ

minister KHM visit
Published on

ಸಚಿವ ಕೆ.ಎಚ್.ಮುನಿಯಪ್ಪ ಭರವಸೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಗ್ರಾಮಾಂತರ ಜಿಲ್ಲಾ ಕೇಂದ್ರ ಯಾವುದು ಎಂಬುದರ ಬಗ್ಗೆ ಶೀಘ್ರ ೋಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕು ದ್ಯಾವರಹಳ್ಳಿ ಗ್ರಾಮದಲ್ಲಿ ಬುಧವಾರ ಸಪ್ಲಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಜಿಲ್ಲಾ ಕೇಂದ್ರ ೋಷಣೆ ಬಗ್ಗೆ ಈ ಹಿಂದಿನಿಂದಲೂ ವಿವಾದ ಸೃಷ್ಟಿಯಾಗಿದೆ. ಕೆಲವು ಮಾನದಂಡಗಳನ್ನು ಆಧರಿಸಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಇದರ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಹೋರಾಟಕ್ಕೆ ತಾರ್ಕಿಕ ಅಂತ್ಯ: ಚನ್ನರಾಯಪಟ್ಟಣ ಧರಣಿ ನಿರತ ರೈತರನ್ನು ನಾನು ಈಗಾಗಲೇ ಭೇಟಿ ಮಾಡಿ ಅವರೊಂದಿಗೆ ಮಾತನಾಡಿದ್ದೇನೆ, ಮತ್ತೊಮ್ಮೆ ರೈತ ಮುಖಂಡರ ಜತೆ ಚರ್ಚಿಸಿ ಅವರ ಹೋರಾಟಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ಹೊಸ ರೇಷನ್ ಕಾರ್ಡ್ ವಿತರಣೆ ಸಂಬಂಧ ಈಗಾಗಲೇ ಚರ್ಚೆ ನಡೆದಿದ್ದು, ಎಪಿಎಲ್ ಹಾಗೂ ಬಿಪಿಎಲ್‌ಗೆ ಸಲ್ಲಿಕೆಯಾಗಿರುವ ಚರ್ಚೆ ಬಗ್ಗೆ ಪರಿಶೀಲನೆ ನಡೆಸಿ ಆದಷ್ಟು ಬೇಗ ಹೊಸ ಪಡಿತರ ಕಾರ್ಡ್ ವಿತರಿಸಲಾಗುವುದು ಎಂದರು. ನಾನು ಕೇಂದ್ರ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ, ಜಿಲ್ಲಾ ಉಸ್ತುವಾರಿ ಸೇರಿ ಯಾವುದೇ ಖಾತೆ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net