

ಉಡುಪಿ: ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಶನಿವಾರ ಹೈದರಾಬಾದ್‌ನಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ, ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಬದರಿಯಲ್ಲಿ ಮಧ್ವಾಚಾರ್ಯರ ಪ್ರತಿಮೆ ಸ್ಥಾಪನೆಗೆ ಕೇಂದ್ರ ಸರ್ಕಾರ ಕ್ರಮ ವಹಿಸಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದರು.
ಪ್ರತಿಮೆ ಸ್ಥಾಪನೆಗೆ ಸಮ್ಮತಿ ಸೂಚಿಸಿದ ಸಚಿವ ರೆಡ್ಡಿ, ಈ ಬಗ್ಗೆ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವುದಾಗಿ ತಿಳಿಸಿದರು. ಸ್ವಾತಂತ್ರ್ಯ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಹರ್‌ಘರ್ ತಿರಂಗಾ ಅಭಿಯಾನ ನಡೆಯಲಿದ್ದು, ಇದರಲ್ಲಿ ಭಾಗವಹಿಸುವಂತೆ ಜನತೆಗೆ ಎಲ್ಲ ಮಠಾಧೀಶರೂ ಕರೆ ನೀಡಬೇಕೆಂದು ಸಚಿವರು ವಿನಂತಿಸಿದರು.