

ಕೋಟ: ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನಕಾರಿ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ ಅನಿಲ್ ಕುಮಾರ್ ಶೆಟ್ಟಿ ಪೆರ್ಡೂರು ಎಂಬಾತನ ವಿರುದ್ಧ ಬುಧವಾರ ಉಡುಪಿ ಜಿಲ್ಲೆಯ ಕೋಟ ಮತ್ತು ಬೈಂದೂರು ಪೊಲೀಸ್ ಠಾಣೆಗಳಿಗೆ ದೂರು ನೀಡಲಾಗಿದೆ. ಕೋಟ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಕೋಟ ಪೊಲೀಸ್ ಠಾಣೆಗೆ ದೂರು ನೀಡಿ ಆರೋಪಿ ವಿರುದ್ಧ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವ, ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ, ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು. ಬೈಂದೂರು ಠಾಣೆಯಲ್ಲಿ ಅಭಿಮಾನಿ ಸಂಘ ದೂರು ನೀಡಿದೆ.