ಶಿರಸಿಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ

kota
Published on

ಶಿರಸಿ: ಉತ್ತರ ಕನ್ನಡದ ಶಿರಸಿಯಲ್ಲಿ ನೂತನ ಆಸ್ಪತ್ರೆ ನಿರ್ಮಾಣ ಹಂತದಲ್ಲಿದ್ದು, ಮುಖ್ಯಮಂತ್ರಿ ಘೊಷಿಸಿರುವ ಟ್ರಾಮಾ ಸೆಂಟರ್ ಅನ್ನು ಅಲ್ಲಿಯೇ ಸ್ಥಾಪಿಸಲು ಕ್ರಮವಹಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗರದಲ್ಲಿ ಬುಧವಾರ ಪತ್ರಕರ್ತರ ಜತೆ ಮಾತನಾಡಿದ ಅವರು, ಉತ್ತರ ಕನ್ನಡ ಭೌಗೋಳಿಕವಾಗಿ ವಿಸ್ತಾರವಾದ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ವಿುಸಲು ಜಾಗ ಗುರುತಿಸಲು ಸೂಚಿಸಲಾಗಿದೆ. ಅದೇ ರೀತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೊಷಿಸಿರುವ ಟ್ರಾಮಾ ಸೆಂಟರ್ ಅನ್ನು ಕಾರವಾರದ ಮೆಡಿಕಲ್ ಕಾಲೇಜ್​ನಲ್ಲಿ ಸ್ಥಾಪಿಸಲು ಚಿಂತಿಸಲಾಗಿತ್ತು. ಆದರೆ, ಘಟ್ಟದ ಮೇಲಿನ ಜನರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಶಿರಸಿಯಲ್ಲಿ ನೂತನವಾಗಿ ನಿರ್ವಿುಸುತ್ತಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ತೆರೆಯಲು ಕಾನೂನಾತ್ಮಕ ಅಂಶಗಳನ್ನು ಪರಿಗಣಿಸಿ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net