ಭೂ ಕುಸಿತ ತಡೆಗೆ 500 ಕೋಟಿ ರೂ. ಶೀಘ್ರ ಬಿಡುಗಡೆ

Minister visit
Published on

ಕಾರವಾರ:ರಾಜ್ಯದ 6 ಜಿಲ್ಲೆಗಳ ಭೂ ಕುಸಿತ ತಡೆಗೋಡೆಗಳ ನಿರ್ಮಾಣಕ್ಕೆ ಶೀಘ್ರವೇ 500 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಶಿರಸಿ ದೇವಿಮನೆ ಘಟ್ಟದಲ್ಲಿ ಭೂ ಕುಸಿತ ಪ್ರದೇಶ ವೀಕ್ಷಿಸಿ, ಕುಮಟಾ ತಹಸೀಲ್ದಾರರ ಕಚೇರಿ ಪರಿಶೀಲಿಸಿ ಅವರು ಮಾತನಾಡಿದರು.

ಕರಾವಳಿಯ ಮೂರು ತಾಲೂಕುಗಳಲ್ಲಿ‌ ಸಮುದ್ರ ಕೊರೆತ ತಡೆಗೆ 300 ಕೋಟಿ ರೂ.ಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು.

ರಾಜ್ಯದಲ್ಲಿ 1500 ಮಳೆ ಮಾಪನ ಕೇಂದ್ರಗಳು ಹಾಳಾಗಿದ್ದು, ಅವುಗಳನ್ನು ಶೀಘ್ರದಲ್ಲಿ ಬದಲಾಯಿಸುವ ಕಾರ್ಯ ಮಾಡಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net