ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ

07BGKSESHWARAPPAKALABURAGI.png
Published on

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬುಧವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದರು.

ಈ ಕುರಿತು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಈಶ್ವರಪ್ಪನವರು, ನಮ್ಮ ಇಲಾಖೆ ವಿಷಯಗಳನ್ನ ರಾಜ್ಯಪಾಲರ ಬಳಿ ಮಾತನಾಡಿಕೊಂಡು ಬಂದಿದ್ದೇನೆ ಅಷ್ಟೇ. ಅದರಲ್ಲೇನೂ ವಿಶೇಷತೆ ಇಲ್ಲ ಎಂದು ಹೇಳಿದ್ದಾರೆ.

ಇಲಾಖೆ ವಿಷಯಗಳನ್ನ ಚರ್ಚೆ ಮಾಡುವುದಕ್ಕೆ ಅವಕಾಶವಿತ್ತು. ಹಾಗಾಗಿ ರಾಜ್ಯಪಾಲರನ್ನು ಭೇಟಿ ಮಾಡಿಕೊಂಡು ಬಂದಿದ್ದೇನೆ. ಇಲ್ಲಿ ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ. ಇಲಾಖೆ ಸಂಬಂಧ ವಿಷಯಗಳನ್ನ ಮಾತನಾಡಲು ರಾಜ್ಯಪಾಲರ ಬಳಿ ಅಷ್ಟೇ, ಅಲ್ಲ ದೆಹಲಿಗೂ ಹೋಗುತ್ತೇನೆ ಎಂದರು.

ದೆಹಲಿಯಲ್ಲಿ ನಮ್ಮ ಪಕ್ಷದ ನಾಯಕರ ಬಳಿ, ಕೇಂದ್ರ ಮಂತ್ರಿಗಳ ಜೊತೆ, ಇಲಾಖೆ ಅಧಿಕಾರಿಗಳ ಜೊತೆ, ಇಲಾಖಾ ಅಭಿವೃದ್ಧಿ ಕುರಿತಂತೆ ಅನೇಕ ಚರ್ಚೆಗಳನ್ನ ಮಾಡಬೇಕಾಗುತ್ತೆ. ಇದರಲ್ಲಿ ವಿಶೇಷವೇನೂ ಇಲ್ಲ. ಇಲಾಖೆ ಅನುದಾನ ವರ್ಗಾವಣೆ ಆಂತರಿಕ ವಿಷಯ. ಅದನ್ನ ಮಾಧ್ಯಮಗಳ ಎದುರು ಮಾತನಾಡಲು ಬರುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net