

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದಲ್ಲಿ ಪ್ರಗತಿಯಲ್ಲಿರುವ ಫ್ಲೈ ಓವರ್ ಕಾಮಗಾರಿಗೆ ಎದುರಾಗಿರುವ ಭೂ ಸ್ವಾಧೀನ ಸಮಸ್ಯೆಯ ಕುರಿತು ಕಾರ್ವಿುಕ ಹಾಗೂ ಜಿಲ್ಲಾ ಉಸ್ತುವಾರಿ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಸಮೀಪದ ಈದ್ಗಾ ಮೈದಾನ ಹಾಗೂ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಕಾಮಗಾರಿ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಲಾಡ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಕುರಿತು ಶೀಘ್ರದಲ್ಲೇ ಪೂರ್ಣ ಮಾಹಿತಿಯೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸಚಿವರು ಸೂಚಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್. ಶಿವಕುಮಾರ್, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.