

ನವಲಗುಂದ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ 24ನೇ ಕಾರ್ಗಿಲ್ ವಿಜಯೋತ್ಸವ ಆಚರಣೆಗೆ ಪಟ್ಟಣದ ಗಣಪತಿ ದೇವಸ್ಥಾನದಲ್ಲಿ ಭಾರತಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ವಿುಕ ಸಚಿವ ಸಂತೋಷ ಲಾಡ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ದೇಶ ನೆಮ್ಮದಿಯ ಜೀವನ ನಡೆಸುತ್ತಿದ್ದರೆ ಇದಕ್ಕೆ ಕಾರಣ ನಮ್ಮ ಸೈನಿಕರು. ಮಳೆ, ಚಳಿ, ಬಿಸಿಲು ಲೆಕ್ಕಿಸದೆ ತಮ್ಮ ಪ್ರಾಣ ಪಣಕ್ಕಿಟ್ಟು ನಮ್ಮೆಲ್ಲರನ್ನೂ ರಕ್ಷಣೆ ಮಾಡುವ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ನಂತರ ಶಾಲಾ ಕಾಲೇಜು, ಎನ್ಸಿಸಿ, ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಮಾಜಿ ಸೈನಿಕರಿಂದ ಶ್ರೀ ಕೃಷ್ಣ ಕಲ್ಯಾಣ ಕೇಂದ್ರದವರೆಗೆ ಆಕರ್ಷಕ ಪಥ ಸಂಚಲನ ನಡೆಯಿತು.
ಶ್ರೀ ಕೃಷ್ಣ ಕಲ್ಯಾಣ ಕೇಂದ್ರದಲ್ಲಿ ಏರ್ಪಡಿಸಿದ್ದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ತಾಲೂಕು ಘಟಕವನ್ನು ಗವಿಮಠದ ಬಸವಲಿಂಗ ಸ್ವಾಮೀಜಿ ಉದ್ಘಾಟಿಸಿದರು, ಮಾಜಿ ಸೈನಿಕರಿಗೆ ಸನ್ಮಾನಿಸಲಾಯಿತು.