ಸಿಎಂ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಚಿವ ಲಾಡ್ ಭಾಗಿ

web 7
Published on

ಧಾರವಾಡ: ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ಜರುಗಿಸಿದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಉಸ್ತುವಾರಿ ಸಚಿವ ಸಂತೋಷ ಲಾಡ್ ಭಾಗವಹಿಸಿದ್ದರು. ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿಗೆ ವಿವರಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಜಾನುವಾರು ಹಾನಿಗೆ ಪರಿಹಾರ ನೀಡಲಾಗಿದೆ.  ಮನೆ ಹಾನಿ ಪ್ರಕರಣಗಳ ಪರಿಶೀಲನೆ ನಡೆದಿದೆ. ನಿಯಮಾನುಸಾರ ಸೂಕ್ತ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net