

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಕೆಲವು ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿವೆ. ಅಂಥ ಕಟ್ಟಡಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಡಿಡಿಪಿಐ, ಡಿಡಿಪಿಯುಗಳಿಗೆ ಪತ್ರ ಬರೆದಿದ್ದಾರೆ. ಕಲಘಟಗಿ ಕ್ಷೇತ್ರದ ಪ್ರವಾಸದಲ್ಲಿದ್ದಾಗ ಕೊಠಡಿಗಳು ಶಿಥಿಲಗೊಂಡಿರುವುದನ್ನು ಗಮನಿಸಿದ್ದೇನೆ. ಇಂತಹ ಕೊಠಡಿಗಳು ಮಕ್ಕಳಿಗೆ ಸೂಕ್ತವಲ್ಲ. ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿ0ಗ್ ಇಲಾಖೆಯ ತಾಂತ್ರಿಕ ಅಧಿಕಾರಿಗಳು ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಬೇಕು. ವಿವರ ವರದಿಯೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.