ಎಂಎಸ್‌ಪಿಸಿ ಕೇಂದ್ರಕ್ಕೆ ಸಚಿವೆ ದಿಢೀರ್ ಭೇಟಿ: ಆಹಾರ ಗುಣಮಟ್ಟ ಪರಿಶೀಲನೆ

Anganwadi food - 3
Published on

ಬೆಂಗಳೂರು: ಬೆಂ. ಉತ್ತರ ತಾಲೂಕಿನ ಚಿಕ್ಕಬಾಣವರದ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರಕ್ಕೆ (ಎಂಎಸ್‌ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಪ್ರತಿಯೊಂದು ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿದರು. ಆಹಾರ ಪದಾರ್ಥಗಳ ತಯಾರಿಕೆ ಹಾಗೂ ಸಂಸ್ಕರಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಕ್ಕಳಿಗೆ ನೀಡುವ ಈ ಆಹಾರ ತಯಾರಿಕೆ, ಸಂಸ್ಕರಣೆ ಹಾಗೂ ಪೂರೈಕೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪ ದೋಷಗಳಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್, ಹಿರಿಯ ನಾಗರಿಕರ ಮತ್ತು ಅಂಗವಿಕಲರ ಇಲಾಖೆ ನಿರ್ದೇಶಕ ಎನ್. ಸಿದ್ದೇಶ್ವರ, ವಿಶೇಷಾಧಿಕಾರಿ ಎನ್.ಎಚ್. ನಿಶ್ಚಲ್, ಬೆಂ. ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದರಾಮಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net