5 ಲಕ್ಷ ರೂ ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Screenshot_2025-05-04-23-59-13-39.jpg
Published on

ಬೆಳಗಾವಿ: ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 5 ಲಕ್ಷ ರೂ. ಪರಿಹಾರ ವಿತರಿಸಿದರು.

ಖನಗಾಂವ ‌ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ಸಿಡಿಲು ಬಡಿತದಿಂದ ಇತ್ತೀಚಿಗೆ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದ ಸಚಿವರು, ಅವಳ ತಂದೆ-ತಾಯಿ, ಕುಟುಂಬದ ಇತರ ಸದಸ್ಯರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ 5 ಲಕ್ಷ ರೂ,ಗಳ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net