

ರಾಯಚೂರು ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 5.ಕೋಟಿ ರೂ.ಗಳ ವೆಚ್ಚದಲ್ಲಿ ನಗರದ ರಾಂಪೂರು ಕೆರೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಅಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಬುಧವಾರ ಚಾಲನೆ ನೀಡಿದರು.
ಕೆರೆ ಪ್ರದೇಶದಲ್ಲಿ ಪೂಜಾ ಕಾರ್ಯಕ್ರಮದ ನಂತರ ಭೂಮಿ ಪೂಜೆ ನೆರವೇರಿಸಿದರು. ಸಣ್ಣ ನೀರಾವರಿ ಇಲಾಖೆಯ ಅನುದಾನದಲ್ಲಿ ರಾಂಪೂರು ಕೆರೆ ಅಭಿವೃದ್ಧಿ ನಡೆಯುತ್ತಿದ್ದು, ಕೆರೆ ಅಭಿವೃದ್ಧಿಗೊಂಡಲ್ಲಿ ಅಂತರ್ಜಲ ವೃದ್ಧಿ ಮತ್ತು ರಾಯಚೂರ ಜನತೆಗೆ ಕುಡಿಯುವ ನೀರು ಪೂರೈಕೆಗೆ ಸಹಕಾರಿಯಾಗಲಿ. ಕಾಮಗಾರಿಯು ಗುಣಮಟ್ಟದಿಂದ ನಡೆಯಬೇಕು ಎಂದು ಇದೆ ವೇಳೆ ಸಚಿವರು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಡಿಸಿ ನಿತೀಶ್ ಕೆ., ಜಿಪಂ ಸಿಇಓ ಈಶ್ವರ ಕುಮಾರ್ ಕಾಂದೂ, ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಎಎಸ್ಪಿ ಕುಮಾರಸ್ವಾಮಿ, ಪಾಲಿಕೆಯ ಸದಸ್ಯರಾರ ಜಯಣ್ಣ, ಜಿಂದಪ್ಪ ಹಾಗೂ ಮುಖಂಡರಾದ ಕೆ.ಶಾಂತಪ್ಪ, ನರಸಿಂಹಲು ಮಾಡಗಿರಿ ಸೇರಿದಂತೆ ಅನೇಕರು ಇದ್ದರು.