

ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ತಾಲೂಕಿನ ಕೋಣಸಾಲೆ ಗ್ರಾಮದಲ್ಲಿ ಸೋಮವಾರ ಕೋಣಸಾಲೆಯಿಂದ ಗುಡಿದೊಡ್ಡಿ ಬೀರೇಶ್ವರಸ್ವಾಮಿ ದೇಗುಲದವರೆಗೆ 2.45 ಕೋಟಿ ರೂ. ವೆಚ್ಚದ ಸುಮಾರು 2 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಕೊಪ್ಪ ಹೋಬಳಿಯ ರಸ್ತೆಗಳನ್ನು ಅಭಿವೃದ್ಧಿ ಮಾಡಲು ಹಾಗೂ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಮುಖಂಡರಾದ ಧರಣೇಶ್, ಕೋಣಸಾಲೆ ಸುನೀಲ್, ಶಿವಪ್ಪ, ರಘು, ನಾಗರಾಜು, ಮಲ್ಲೇಶ್, ಕುಮಾರ್, ಶಂಕರಯ್ಯ ಇದ್ದರು.