ಲಸಿಕೆ ವಿತರಣೆ ಬೋಗಸ್ ಎಂಬ ಡಿಕೆಶಿ ಪಾಪದ ಮಾತು ಒಳ್ಳೆಯದಲ್ಲ: ಸಚಿವ ಮಾಧುಸ್ವಾಮಿ ಹೇಳಿಕೆ

Madhuswamy
Published on

ಉಡುಪಿ: ದೇಶದ 80 ಕೋಟಿ ಜನರಿಗೆ ಉಚಿತ ಲಸಿಕೆ ನೀಡುವುದು ಸಾಮಾನ್ಯ ಮಾತಲ್ಲ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಲಸಿಕೆ ವಿತರಣೆ ಬೋಗಸ್ ಎಂಬ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾಪದ ಮಾತು ಒಳ್ಳೆಯದಲ್ಲ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಮಾಧು ಸ್ವಾಮಿ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಸರ್ಗಿಕ ಆಪತ್ತನ್ನು ಎಲ್ಲರೂ ಒಟ್ಟಾಗಿ ಎದುರಿಸಬೇಕು. ಲಸಿಕೆ ಉತ್ಪಾದಿಸಲು ಕಂಪನಿಗಳಿಗೆ ಸಮಯಾವಕಾಶ ಬೇಕಾಗುತ್ತದೆ ಎಂಬುದನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು. ವಿರೋಧಕ್ಕಾಗಿ ವಿರೋಧ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಎಲ್ಲ ಪಕ್ಷಗಳಿಗೂ ತಮ್ಮ ಪಕ್ಷವನ್ನು ವಿಸ್ತರಿಸುವ ಉದ್ದೇಶವಿರುತ್ತದೆ. ಬಿಜೆಪಿ ಪಕ್ಷಕ್ಕೂ ಯಾರು ಬೇಕಾದರೂ ಬರಬಹುದು. ಬೇರೆ ಪಕ್ಷದವರು ಬಿಜೆಪಿಗೆ ಬಂದರೂ ಸ್ವಾಗತ ಮಾಡುತ್ತೇವೆ ಎಂದು ಮಾಧುಸ್ವಾಮಿ ಹೇಳಿದರು. ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net