

ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ವಿವಿಧ ವಾರ್ಡ್‌ಗಳ ಪರಿವೀಕ್ಷಣೆ ನಡೆಸಿದರು.
ಹೊರರೋಗಿಗಳ ವಿಭಾಗ(ಚೀಟಿ ವಿತರಣೆ), ಮೂಳೆ ಮತ್ತು ಕೀಲು, ಡಯಾಲಿಸಿಸ್, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್‌ಗಳಿಗೆ ಭೇಟಿ ನೀಡಿ ರೋಗಿಗಳು, ಸಾರ್ವಜನಿಕರು ಹಾಗೂ ಆಸ್ಪತ್ರೆ ನಾನ್ ಕ್ಲಿನಿಕಲ್ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದರು.
ಕನಿಷ್ಠ ವೇತನ ಹೆಚ್ಚಿಸಿ ಹೊರಡಿಸಿರುವ ಅಧಿಸೂಚನೆಯನ್ನು ಅಧಿಕೃತ ಆದೇಶವನ್ನಾಗಿ ಜಾರಿಮಾಡಿಸಿಕೊಡುವಂತೆ ಒತ್ತಾಯಿಸಿ ಹೊರಗುತ್ತಿಗೆ ಕಾರ್ಮಿಕ ಸಂಘದ ಪದಾಧಿಕಾರಿಗಳು ಸಚಿವರಿಗೆ ಮನವಿ ಸಲ್ಲಿಸಿದರು. ಎಂಎಲ್‌ಸಿ ಬಲ್ಕಿಷ್ ಬಾನು, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಡಿಸಿ ಗುರುದತ್ತ ಹೆಗಡೆ, ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಿದ್ದನ ಗೌಡ ಪಾಟೀಲ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಕಲೀಂ ಉಲ್ಲಾ, ಜಿ.ಡಿ.ಮಂಜುನಾಥ ಇತರರಿದ್ದರು.