ತಂದೆ ಓದಿದ ಸರ್ಕಾರಿ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ

misiter madhu bangarappa visit govt school
ಮಾಜಿ ಸಿಎಂ ಎಸ್.ಬಂಗಾರಪ್ಪ ಅವರು ಓದಿದ ಶಿರಾಳಕೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದ ಸಚಿವ ಮಧು ಬಂಗಾರಪ್ಪ ಅವರನ್ನು ವಿದ್ಯಾರ್ಥಿಗಳು ಸ್ವಾಗತಿಸಿದರು.
Published on

ಶಿವಮೊಗ್ಗ: ಮಾಜಿ ಸಿಎಂ ಎಸ್.ಬಂಗಾರಪ್ಪ ಅವರು ಓದಿದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಸರ್ಕಾರಿ ಪಿಯು ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ಶನಿವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು.

ಸರ್ಕಾರಿ ಶಾಲೆಗಳಲ್ಲಿ ಓದಿದ ವ್ಯಕ್ತಿಗಳಲ್ಲಿ ಅನೇಕರು ದೊಡ್ಡ-ದೊಡ್ಡ ಹುದ್ದೆ ಅಲಂಕರಿಸಿದ್ದಾರೆ. ನಮ್ಮ ತಂದೆಯು ಸಹ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ರಾಜ್ಯದ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿ, ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಿದ್ದಾರೆಂದು ಭಾವುಕರಾದರು.

ತಮ್ಮ ತಂದೆಯ ಹಾದಿಯಲ್ಲಿ ನಾನು ಕೂಡ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಶಿರಾಳಕೊಪ್ಪದಲ್ಲಿ ನೂತನವಾಗಿ ಸುಸಜ್ಜಿತವಾದ ಕೆಪಿಎಸ್(ಕರ್ನಾಟಕ ಪಬ್ಲಿಕ್ ಶಾಲೆ) ಅನ್ನು ನಿರ್ಮಾಣ ಮಾಡಿ ಈ ಭಾಗದ ಜನರ ಬಹು ದಿನದ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net