ಇಸ್ರೇಲ್ ಸಂತ್ರಸ್ತನಿಗೆ ಸ್ಪಂದಿಸಿದ ಸಚಿವ ಮಧು

minister madhu bangarappa
ವಿಡಿಯೋ ಕರೆಯಲ್ಲಿ ಇಸ್ರೇಲ್ ಸಂತ್ರಸ್ತನೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ.
Published on

ಶಿವಮೊಗ್ಗ: ಇಸ್ರೇಲ್‌ನಲ್ಲಿ ಸಂತ್ರಸ್ತರಾದ ಶಿವಮೊಗ್ಗದ ಇಂದಿರಾ ಬಡಾವಣೆಯ ಯುವಕ ಸ್ವಾಮಿ ಎಂಬುವರ ದೂರವಾಣಿ ಕರೆಯನ್ನು ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ ಧೈರ್ಯ ತುಂಬಿದರು.

ಕುವೆಂಪು ರಂಗಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಗಿಸಿ ಹೊರಬರುತ್ತಿದ್ದಾಗ ಎದುರಾಗ ಕಾರ್ಯಕರ್ತರೊಬ್ಬರ ಮೊಬೈಲ್‌ನಲ್ಲಿ ವಿಡಿಯೋ ಕಾಲ್ ಮೂಲಕ ಮಾತನಾಡಿದರು. ರಾಜ್ಯ ಸರ್ಕಾರ ಯಾವುದೇ ರೀತಿಯ ನೆರವು ನೀಡಲು ಸಿದ್ಧವಿದೆ ಎಂದರು.
ಆತಂಕಕ್ಕೊಳಗಾಗದೆ ಧೈರ್ಯವಾಗಿ, ಜತೆಗಿರುವ ಸ್ನೇಹಿತರಿಗೂ ಧೈರ್ಯದಿಂದ ಇರುವಂತೆ ಹೇಳಿದರು. ವಾಪಸ್ ಬರಲು ಸಿದ್ಧರಿದ್ದರೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net