

ಮೈಸೂರು: ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ದಸರಾ ವೆಬ್‌ಸೈಟ್ ಉದ್ಘಾಟಿಸಿದರು. ಈ ಸಂದರ್ಭ ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸಂದರ್ಭ ಮಾತನಾಡಿದ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸೆ.24 ರಿಂದ 30ರವರೆಗೆ ನಗರದ ಮಾನಸಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ದಸರಾ ಯುವ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಟ ಶ್ರೀಮುರಳಿ, ನಟಿ ರುಕ್ಮಿಣಿ ವಸಂತ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.
ಈ ಸಂದರ್ಭ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಇತರರು ಇದ್ದರು.